Spread the love

ಸಂಯುಕ್ತ ಟೈಮ್ಸ್, ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾಳೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿರುವ ಘಟನೆ ಸಿಂಗನೋಡಿ ತಾಂಡಾದಲ್ಲಿ ಕೇಳಿಬಂದಿದೆ.

ಮೃತನನ್ನು ರಾಯಚೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯ ರಾಜು ನಾಯ್ಕ್ (38) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿ, ಉಸಿರು ಗಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಂದಿಗೆ ಮೃತನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳು. ಇದೇ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. 

ಈ ಸಂಬಂಧ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಪತ್ನಿ ಸ್ನೇಹಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 

Leave a Reply

Your email address will not be published. Required fields are marked *

You missed

error: Content is protected !!