Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದಲೇ ಬಾಲಕಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.

ಈ ಘಟನೆ ಬನಶಂಕರಿಯ ಕಾವೇರಿ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಜೋಯಾ (9) ಎಂದು ಗುರುತಿಸಲಾಗಿದೆ. ಈಕೆ ಕರಿಸಂದ್ರದ ನಮ್ಮೂರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು.

ಮಂಗಳವಾರ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಕರು ಪೌಷ್ಠಿಕಾಂಶ ಮಾತ್ರೆ ನೀಡಿದ್ರಂತೆ. ಇದನ್ನ ಸೇವಿಸಿದ ಜೋಯಾ ಅಲ್ಲೇ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಶಾಲೆಯ ಟೀಚರ್ಸ್ ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನ ಸೇರಿಸಿದ್ದರು. ಆದರೆ ರಾತ್ರಿ ಬಾಲಕಿ ಮತ್ತೆ ಅಸ್ವಸ್ಥಳಾಗಿದ್ದು, ಚಿಕಿತ್ಸೆ ಫಲಿಸದೇ ಮೃಪಟ್ಟಿದ್ದಾಳೆ.

Leave a Reply

Your email address will not be published. Required fields are marked *

You missed

error: Content is protected !!