Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ.

ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ ಒಬ್ಬರಿಗೆ ಕರೆ ಮಾಡಿದ್ದ. ಬಳಿಕ ವರ್ಗಾವಣೆ ಮಾಡಿಸಿಕೊಡುವುದಾಗಿ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಇವನ ಮಾತನ್ನು ನಂಬಿದ್ದ ಇಂಜಿನಿಯರ್ 80 ಸಾವಿರ ರೂ. ಹಣ ಕೊಟ್ಟಿದ್ದರು. ಬಳಿಕ ಈತನ ವಂಚನೆ ಬಗ್ಗೆ ತಿಳಿದು ಸಚಿವರ ಆಪ್ತ ಕಾರ್ಯದರ್ಶಿಗಳು ದೂರು ನೀಡಿದ್ದರು.

ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!