Spread the love

ಸಂಯುಕ್ತ ಟೈಮ್ಸ್, ನವದೆಹಲಿ: ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ದುಃಖದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತ್ ಮಂಟಪದಲ್ಲಿ ನಡೆದ ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ನೆನಪಿಗಾಗಿ ಆಯೋಜಿಸಲಾದ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಈ ವೇಳೆ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದರ ಕುರಿತು ಕೂಲಂಕಷವಾಗಿ ಮರುಪರಿಶೀಲಿಸುವ ಅಗತ್ಯತೆಯನ್ನು ಹುಟ್ಟುಹಾಕಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಇತ್ತೀಚಿನ ದಿನಗಳಲ್ಲಿ ಸಮಯೋಚಿತ ಆಡಳಿತ, ಮೂಲಸೌಕರ್ಯ, ಸೌಲಭ್ಯಗಳು, ತರಬೇತಿ ಮತ್ತು ಮಾನವ ಸಂಪನ್ಮೂಲಗಳ ಸುಧಾರಣೆ ಕಂಡುಬಂದಿದೆ ಎಂದು ನನಗೆ ಹೇಳಲಾಗುತ್ತಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಾಗಿದೆ. ಅಲ್ಲದೇ ಇತ್ತೀಚಿನ ವರ್ಷಗಳಲ್ಲಿ ಆಯ್ಕೆ ಸಮಿತಿಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿರುವುದನ್ನು ಗಮನಿಸಲು ನನಗೆ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ.

ಈ ವೇಳೆ ಮಾತಾಡಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಕೇಸ್ ಮ್ಯಾನೇಜ್ಮೆಂಟ್ ಮೂಲಕ ಬಾಕಿ ಪ್ರಕರಣಗಳನ್ನು ಕಡಿಮೆ ಮಾಡಲು ನಾವು ಕ್ರಿಯಾ ಯೋಜನೆಯನ್ನು ರೂಪಿಸಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ನ ಧ್ವಜ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದರು. 

Leave a Reply

Your email address will not be published. Required fields are marked *

You missed

error: Content is protected !!