Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ.

ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ.

Information Technology Act 2000, ಬಿಎನ್‌ಎಸ್‌ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್‌ ಕುಮಾರ್‌ (ಎ2), ಸುಧಾಕರ (ಎ3), ಕಿರಣ್‌ ಕುಮಾರ್‌ (ಎ4), ಲೋಹಿತ್‌ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ FIRನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!