Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಪಾಪಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಲಕ್ಷ್ಮಿ (7) ಮತ್ತು ಗೌತಮ್ (9) ಎಂದು ಗುರುತಿಸಲಾಗಿದೆ. ಇವರನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ್ದಾಳೆ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಇಬ್ಬರು ಮಕ್ಕಳನ್ನು ತಾಯಿ ಕೊಲೆ ಮಾಡಿದ್ದಾಳೆ. ಬಳಿಕ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ  ಗಂಗಾದೇವಿಯನ್ನ ವಶಕ್ಕೆ ಪಡೆದಿದ್ದಾರೆ.

ಪತಿಯನ್ನು ಜೈಲಿಗೆ ಕಳುಹಿಸಿದ್ದಳು: ಗಂಗಾದೇವಿ ಕಳೆದ ಮಾರ್ಚ್ ತಿಂಗಳಲ್ಲಿ ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಳು. ಗಂಡ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದಾನೆಂದು ದೂರು ನೀಡಿದ್ದಳು. ಗಂಗಾದೇವಿ ಕೊಟ್ಟ ದೂರಿನ ಆಧಾರದ ಮೇಲೆ ಗಂಡನನ್ನ ಬಂಧಿಸಿ ಜಾಲಹಳ್ಳಿ ಪೊಲೀಸರು ಜೈಲಿಗೆ ಕಳಿಸಿದ್ದರು. ಅದಾದ ಬಳಿಕ ಈಗ ಇಬ್ಬರು ಮಕ್ಕಳನ್ನ ಕೊಲೆ ಕೊಲೆ ಮಾಡಿದ್ದಾಳೆ.

ಕೆಲಸ ಇಲ್ಲದೇ ಮಕ್ಕಳಿಬ್ಬರನ್ನ ಸಾಕುವುದಕ್ಕೆ ಕಷ್ಟವಾಗುತ್ತಿತ್ತು. ಆ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನ ರಾತ್ರಿ 9:30ರಕ್ಕೆ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

You missed

error: Content is protected !!