Spread the love

ಸಂಯುಕ್ತ ಟೈಮ್ಸ್, ಮಂಗಳೂರು:  ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ಬುಧವಾರ (ಜು.23) ಎಸ್‌ಐಟಿ ತಂಡ ತನಿಖೆ ಆರಂಭಿಸಲಿದೆ.

ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ನಾಳೆ ಧರ್ಮಸ್ಥಳಕ್ಕೆ ತೆರಳಲಿದೆ. ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್‌ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಬಳಿಕ ಅಧಿಕೃತವಾಗಿ ನಾಳೆ ಪ್ರಕರಣ ಎಸ್‌ಐಟಿಗೆ ಹಸ್ತಾಂತರವಾಗಲಿದೆ.

Leave a Reply

Your email address will not be published. Required fields are marked *

You missed

error: Content is protected !!