Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಕಳೆದ ಅಧಿವೇಶನದಲ್ಲಿ ಸದನದಿಂದ ಅಮಾನತ್ತಾದ ಬಿಜೆಪಿಯ 18 ಶಾಸಕರಿಗೆ ಕೊನೆಗೂ ಸಂಡೇ ಸ್ಪೆಷಲ್ ರೂಪದಲ್ಲಿ ಗುಡ್‌ನ್ಯೂಸ್ ಸಿಕ್ಕಿದೆ. 2 ತಿಂಗಳ ನಂತರ ಶಾಸಕರ ಅಮಾನತ್ತು ಆದೇಶ ವಾಪಸ ಪಡೆಯಲಾಗಿದೆ.

ಸಂಜೆ ವಿಧಾನಸೌಧದಲ್ಲಿ ಸ್ಪೀಕರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌, ವಿಪಕ್ಷ ನಾಯಕ ಆರ್. ಅಶೋಕ್ ಸಭೆ ನಡೆಸಿ ಅಮಾನತ್ತು ಆದೇಶ ವಾಪಸ್ ಪಡೆಯುವ ನಿರ್ಣಯ ಮಾಡಲಾಯ್ತು.

ಕಳೆದ ಮಾ.21 ರಂದು ಸದನದಲ್ಲಿ ಹನಿಟ್ರ್ಯಾಪ್ ಪ್ರಕರಣ ಮುಂದಿಟ್ಕೊಂಡು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ರು. ಈ ವೇಳೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ್ದಾರೆಂಬ ಕಾರಣಕ್ಕೆ, ಬಿಜೆಪಿಯ 18 ಶಾಸಕರನ್ನ ಸ್ಪೀಕರ್ ಯು.ಟಿ ಖಾದರ್ 6 ತಿಂಗಳ ಕಾಲ ಅಮಾನತುಗೊಳಿಸಿ‌ ಆದೇಶ‌ ಹೊರಡಿಸಿದ್ದರು. ಈ ಸಂಬಂಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ರು. ಆದೇಶ ವಾಪಸ್‌ಗೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದಿದ್ರು. ರಾಜ್ಯಪಾಲರಿಗೂ ದೂರು ಕೊಟ್ಟಿದ್ರು. ಕೋರ್ಟ್ ಮೆಟ್ಟಲೇರಲು ಮುಂದಾಗಿದ್ರು. ಸಾಕಷ್ಟು ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಅಮಾನತು ಆದೇಶ ವಾಪಸ್‌ಗೆ ಒಲವು ವ್ಯಕ್ತವಾಯಿತು. ಇಂದು ಸರ್ಕಾರದ ಜತೆ ಚರ್ಚಿಸಿ ಸ್ಪೀಕರ್ ಖಾದರ್ ತಮ್ಮ ವಿವೇಚನಾಧಿಕಾರ ಬಳಸಿ ಅಮಾನತು ಆದೇಶ ವಾಪಸ್ ಪಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಶೋಕ್‌, ಸೋಮವಾರ ಸ್ಪೀಕರ್ ಅವರು ಹಜ್ ಯಾತ್ರೆಗೆ ಹೋಗಲಿದ್ದಾರೆ. ಅದ್ದರಿಂದ ನಾಳೆ ಸ್ಪೀಕರ್ ಅಧಿಕಾರಿಗಳ ಸಭೆ ಕರೆದು ಆದೇಶ ಹೊರಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!