Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ 1.80 ಲಕ್ಷ ಮತ ಪಡೆದು ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಗೆದ್ದು ಬೀಗಿದ್ದಾರೆ.

ರಾಜ್ಯ ಕಾಂಗ್ರೆಸ್ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ, ಇದೀಗ ತಮ್ಮ ಪುತ್ರ ರಾಹುಲ್ ಜಾರಕಿಹೊಳಿಯನ್ನು ಪಾಲಿಟಿಕ್ಸ್‌ಗೆ ಕರೆತಂದಿದ್ದಾರೆ. ಸದ್ಯ ರಾಹುಲ್ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಅಕ್ಟೋಬರ್ ತಿಂಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ ಸ್ಪರ್ಧಿಸಿದ್ದರು. ಆನ್‌ಲೈನ್ ಮತಗಳ ಚಲಾವಣೆ ಮೂಲಕ ನಡೆದ ಚುನಾವಣೆಯಲ್ಲಿ ರಾಹುಲ್‌ಗೆ ಭರ್ಜರಿ ಗೆಲುವು ಸಿಕ್ಕಿದೆ.

Leave a Reply

Your email address will not be published. Required fields are marked *

You missed

error: Content is protected !!