ಸಂಯುಕ್ತ ಟೈಮ್ಸ್, ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ ಬೆಳಗ್ಗೆ ರಾಜ್ಯಾದ್ಯಂತ ಬಿಜೆಪಿ ರಸ್ತೆ ತಡೆ ಜಾಥಾ ಇಟ್ಟುಕೊಂಡಿದೆ.

ಸಚಿವ ನಾಗೇಂದ್ರ ಅವರ ಮೌಖಿಕ ಸೂಚನೆ ಮೇರೆಗೆ ಈ ಬೃಹತ್ ಹಗರಣ ನಡೆದಿದೆ. ಅಲ್ಲದೇ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲೂ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ ಆದರೂ ರಾಜ್ಯ ಸರಕಾರ ಅವರ ರಕ್ಷಣೆಗೆ ನಿಂತಿದೆ ಎಂದು ಹೇಳಿದೆ.
ಮುಖ್ಯಮಂತ್ರಿಗಳು ಕೂಡಲೇ ಈ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಯುವಾ ಮೋರ್ಚಾ ಆಗ್ರಹಿಸಿದೆ.

