ಸಂಯುಕ್ತ ಟೈಮ್ಸ್, ತುಮಕೂರು: ಪೊಲೀಸ್ ಕಸ್ಟಡಿಯಿಂದ ಕಳ್ಳ ಪರಾರಿ ಆದ ಹಿನ್ನೆಲೆ ಗುಬ್ಬಿ ಪೊಲೀಸ್ ಠಾಣೆ PSI ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

PSI ದೇವಿಕಾ, ಮೂವರು ಹೆಡ್ ಕಾನ್ಸ್ಟೇಬಲ್, ಒಬ್ಬ ಪೊಲೀಸ್ ಪೇದೆ ಸೇರಿ ಒಟ್ಟು ಐವರನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯಲೋಪ ಹಿನ್ನೆಲೆ ಪಿಎಸ್ಐ ಸೇರಿ ಐವರು ಪೊಲೀಸರು ಅಮಾನತು ಮಾಡಿದ್ದು, ತುಮಕೂರು ಎಸ್ಪಿ ಅಶೋಕ್ ಕೆವಿ ಐವರು ಪೊಲೀಸರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಡಕಾಯಿತಿ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಗುಬ್ಬಿ ಠಾಣೆಗೆ ಕರೆತಂದಿದ್ದರು. ಕಳೆದ ಗುರುವಾರ ಬೆಳಗ್ಗಿನಜಾವ 4 ಗಂಟೆಯಲ್ಲಿ ಆರೋಪಿ ಠಾಣೆಯಿಂದ ಪರಾರಿಯಾಗಿದ್ದಾನೆ.
ಆರೋಪಿ ಸೈಯದ್ ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ವಾಸಿ ಆಗಿದ್ದು, ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಸದ್ಯ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದ್ದು, ಮೂರು ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ

