Spread the love

ಸಂಯುಕ್ತ ಟೈಮ್ಸ್, ಚಿಕ್ಕೋಡಿ: ಈಜಲು ಹೋದ ಮೂವರು ಬಾಲಕರು ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೇ 3ರ ಶನಿವಾರ ನಡೆದಿದೆ.

ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಮಾಹಿತಿ ಪೊಲೀಸರಿಗೆ ಸ್ಥಳೀಯರಿಂದ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನಿಸುವ ಕಾರ್ಯವನ್ನು ಪೊಲೀಸರು ಮಾಡಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!