Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಲೋಕಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿ ಆದೇಶಿಸಿದೆ.

ಬೆಳಗಾವಿಯ ಕುವೆಂಪು ನಗರದ ತಮ್ಮ ಗೃಹ ಕಚೇರಿ ಸಮೀಪದ ಸಭಾಂಗಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಚ್ 20ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗು ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದರು. ಈ ಸಭೆಗೆ ಅನುಮತಿ ಪಡೆದಿರಲಿಲ್ಲ. ಈ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು.

ಅಲ್ಲದೇ ತಮ್ಮ ಪುತ್ರ ಹಾಗು ಕಾಂಗ್ರೆಸ್​ ಅಭ್ಯರ್ಥಿ ಮೃಣಾಲ್ ಪರ ಪ್ರಚಾರ ಮಾಡುವಂತೆಯೂ ಈ ಸಭೆಯಲ್ಲಿ ಹೆಬ್ಬಾಳ್ಕರ್ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸೂಚಿಸಿದ್ದರು ಎಂಬ ಆರೋಪವಿದೆ. ಇದರ ಬೆನ್ನಲ್ಲೇ ಹೆಬ್ಬಾಳ್ಕರ್ ಅವರಿಗೆ ಸಮನ್ಸ್ ಜಾರಿಯಾಗಿದ್ದು, ಏಪ್ರಿಲ್ 30ರೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಎರಡನೇ ಆರೋಪಿಯಾಗಿ ಸಭೆಗೆ ಅವಕಾಶ ಮಾಡಿಕೊಟ್ಟ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣ ಎಂಬವರಿಗೂ ಸಮನ್ಸ್‌ ಜಾರಿ ಮಾಡಲಾಗಿದೆ.

Leave a Reply

Your email address will not be published. Required fields are marked *

You missed

error: Content is protected !!